Skip to content

Indian Revised Version — Kannada (2019)

1 ಥೆಸಲೋನಿಕದವರಿಗೆ 3

1ಆದುದರಿಂದ ನಾನು ಇನ್ನು ತಾಳಲಾರದೆ ಅಥೇನೆಯಲ್ಲಿ ಒಬ್ಬಂಟಿಗನಾಗಿಯೇ ಇರುವುದು ಒಳ್ಳೆಯದೆಂದು ಯೋಚಿಸಿ, 2ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ಉತ್ತೇಜನಪಡಿಸುವುದಕ್ಕೂ ನಮ್ಮ ಸಹೋದರನೂ, ಕ್ರಿಸ್ತನ ಸುವಾರ್ತೆಯ ಕಾರ್ಯದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು. 3ಸಂಕಟಗಳನ್ನು ಅನುಭವಿಸುವುದಕ್ಕಾಗಿಯೇ ನಾವು ನೇಮಿಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ. 4ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಈ ಮೊದಲೇ ಹೇಳಿದ್ದೆವಲ್ಲಾ. ಅದರಂತೆಯೇ ಆಯಿತು, ಅದು ನಿಮ್ಮ ಅನುಭವಕ್ಕೂ ಬಂದಿತು. 5ಆದ್ದರಿಂದ ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯನ್ನು ಕುರಿತು ನಾನು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ನಿಮ್ಮ ಬಳಿಗೆ ಕಳುಹಿಸಿದೆನು. 6ಆದರೆ ತಿಮೊಥೆಯನು ನಿಮ್ಮ ಬಳಿಯಿಂದ ಬಂದು ನಿಮ್ಮ ನಂಬಿಕೆ ಮತ್ತು ಪ್ರೀತಿಯ ಕುರಿತಾಗಿ ಶುಭವರ್ತಮಾನವನ್ನು ಹೇಳಿ, ನೀವು ನಮ್ಮನ್ನು ಯಾವಾಗಲೂ ಪ್ರೀತಿಪೂರ್ವಕವಾಗಿ ನೆನಪುಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ಸಹ ನಮ್ಮನ್ನು ನೋಡುವುದಕ್ಕಾಗಿ ಅಪೇಕ್ಷಿಸುತ್ತಿದ್ದೀರೆಂಬುದನ್ನು ತಿಳಿಸಿದ್ದಾನೆ. 7ಸಹೋದರರೇ, ಈ ವಾರ್ತೆಯನ್ನು ಕೇಳಿ ನಮ್ಮ ಎಲ್ಲಾ ಕಷ್ಟದಲ್ಲಿಯೂ ಸಂಕಟದಲ್ಲಿಯೂ ನಿಮ್ಮ ನಂಬಿಕೆಯ ಮುಖಾಂತರ ನಮಗೆ ಸಮಾಧಾನವಾಯಿತು. 8ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಮಗೆ ಜೀವಕಳೆ. 9ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷಗಳಿಗಾಗಿ ದೇವರಿಗೆ ಅಷ್ಟೊಂದು ಸ್ತೋತ್ರ ಮಾಡುವುದು ನಮ್ಮಿಂದಾದಿತೇ? 10ನಿಮ್ಮ ಮುಖವನ್ನು ನೋಡುವುದಕ್ಕೂ ನಿಮ್ಮ ನಂಬಿಕೆಯ ಕೊರತೆಗಳನ್ನು ನೀಗುವುದಕ್ಕೂ ನಾವು ಹಗಲಿರುಳು ದೇವರನ್ನು ತುಂಬಾ ಕಳಕಳಿಯಿಂದ ಬೇಡುವವರಾಗಿದ್ದೇವೆ. 11ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು, ನಾವು ನಿಮ್ಮ ಬಳಿಗೆ ಬರುವುದಕ್ಕೆ ಮಾರ್ಗವನ್ನು ಸರಾಗಮಾಡಿಕೊಡಲಿ. 12ನಿಮ್ಮಲ್ಲಿ ನಮ್ಮ ಪ್ರೀತಿಯು ಹೆಚ್ಚಾದ ಹಾಗೆಯೇ ನಿಮ್ಮ ಪ್ರೀತಿಯು ಒಬ್ಬರಿಂದೊಬ್ಬರಿಗೆ ಹರಡಿ ಎಲ್ಲಾ ಮನುಷ್ಯರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ಆಶೀರ್ವದಿಸಲಿ. 13ನಮ್ಮ ಕರ್ತನಾದ ಯೇಸು ತನ್ನ ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ.

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.