Skip to content

Indian Revised Version — Kannada (2019)

ಯೆಶಾಯನು 35

1ಅರಣ್ಯವೂ, ಮರುಭೂಮಿಯೂ ಆನಂದಿಸುವವು; ಒಣನೆಲವು ಹರ್ಷಿಸಿ ತಾವರೆಯಂತೆ ಕಳಕಳಿಸುವುದು. 2ಅದು ಸಮೃದ್ಧಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ, ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ, ನಮ್ಮ ದೇವರ ವೈಭವವನ್ನೂ ಕಾಣುವವು. 3ಜೋಲುಬಿದ್ದ ಕೈಗಳನ್ನೂ, ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ. 4ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ. 5ಆಗ ಕುರುಡರ ಕಣ್ಣು ಕಾಣುವುದು, ಕಿವುಡರ ಕಿವಿ ಕೇಳುವುದು. 6ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು, ಅರಣ್ಯದಲ್ಲಿ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು. 7ಬೆಂಗಾಡು ಸರೋವರವಾಗುವುದು, ಒಣನೆಲದಲ್ಲಿ ಬುಗ್ಗೆಗಳು ಹರಿಯುವವು; ನರಿಗಳು ಮಲಗುತ್ತಿದ್ದ ಸ್ಥಳವು ಆಪುಜಂಬುಗಳ ಪ್ರದೇಶವಾಗುವುದು. 8ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು. 9ಸಿಂಹವು ಅಲ್ಲಿ ಇರದು. ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗುವುದಿಲ್ಲ. ಅದು ಅಲ್ಲಿ ಕಾಣುವುದೇ ಇಲ್ಲ. ಬಿಡುಗಡೆಯಾದವರೇ ಅಲ್ಲಿ ನಡೆಯುವರು. 10ಯೆಹೋವನು ವಿಮೋಚಿಸಿದವರು ಹಿಂದಿರುಗಿ, ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.