Skip to content

Indian Revised Version — Kannada (2019)

ಯೆರೆಮೀಯನು 45

1ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ ಈ ವಾಕ್ಯವನ್ನು ಅವನಿಗೆ ಹೇಳಿದನು. 2“ಬಾರೂಕನೇ, ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೀಗೆ ಹೇಳುತ್ತಾನೆ, ‘ನನ್ನ ಗತಿಯನ್ನು ಏನು ಹೇಳಲಿ? 3ವ್ಯಥೆಪಡುತ್ತಿದ್ದ ನನ್ನನ್ನು ಯೆಹೋವನು ಹೆಚ್ಚೆಚ್ಚಾಗಿ ದುಃಖಪಡಿಸಿದ್ದಾನೆ; ನಾನು ನರಳಿ ನರಳಿ ದಣಿದಿದ್ದೇನೆ, ನನಗೆ ಯಾವ ವಿಶ್ರಾಂತಿಯೂ ದೊರಕದು’ ಎಂದು ನೀನು ಹೇಳಿದೆಯಲ್ಲಾ, 4ಯೆಹೋವನ ಈ ವಾಕ್ಯವನ್ನು ಕೇಳು, ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು. 5ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸ ಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನು ಉಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಉಳಿಸಿಕೊಳ್ಳುವುದಕ್ಕೆ ನಿನಗೆ ಅವಕಾಶ ಕೊಡುವೆನು. ಇದು ಯೆಹೋವನಾದ ನನ್ನ ನುಡಿ.”

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.