Indian Revised Version — Kannada (2019)
ಯೋಬನು 25
1ಆ ಮೇಲೆ ಶೂಹ್ಯನಾದ ಬಿಲ್ದದನು ಹೀಗೆಂದನು, 2“ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು, ತನ್ನ ಉನ್ನತ ಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ. 3ಆತನ ಸೈನ್ಯಗಳಿಗೆ ಲೆಕ್ಕವಿದೆಯೋ? ಆತನ ತೇಜಸ್ಸು ಯಾರಲ್ಲಿಯೂ ಮೂಡುವುದಿಲ್ಲ? 4ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ? ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ? 5ನೋಡಿರಿ, ಆತನ ದೃಷ್ಟಿಯಲ್ಲಿ ಚಂದ್ರನಿಗಾದರೂ ಕಳೆಯಿಲ್ಲ, ನಕ್ಷತ್ರಗಳೂ ಶುದ್ಧವಲ್ಲ. 6ಹೀಗಿರುವಲ್ಲಿ ನರಹುಳವು ಅಶುದ್ಧವಾದದ್ದು! ನರಕ್ರಿಮಿಯು ಎಷ್ಟೋ ಅಪವಿತ್ರವಾಗಿದ್ದಾನೆ!”
This chapter is not in this version.
Keep going
Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..