Skip to content

Indian Revised Version — Kannada (2019)

ಅರಣ್ಯಕಾಂಡ 33

1ಮೋಶೆ ಮತ್ತು ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ಸೈನ್ಯಸೈನ್ಯವಾಗಿ ಹೊರಟ ಇಸ್ರಾಯೇಲರ ಪ್ರಯಾಣಗಳ ವಿವರ: 2ಮೋಶೆ ಯೆಹೋವನ ಅಪ್ಪಣೆಯ ಪ್ರಕಾರ ಇಸ್ರಾಯೇಲರ ಪ್ರಯಾಣಗಳ ವಿವರಗಳನ್ನು ಬರೆದನು. 3ಮೊದಲನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಪಸ್ಕಹಬ್ಬದ ಮರುದಿನದಲ್ಲಿ ಇಸ್ರಾಯೇಲರು ಐಗುಪ್ತ್ಯರ ಎದುರಿನಲ್ಲೇ ರಮ್ಸೇಸಿನಿಂದ ಹೊರಟರು. 4ಆ ಕಾಲದಲ್ಲಿ ಯೆಹೋವನು ಐಗುಪ್ತ್ಯರ ದೇವತೆಗಳನ್ನು ಶಿಕ್ಷಿಸಿ, ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದ್ದರಿಂದ ಅವರು ಆ ಮಕ್ಕಳ ಶವಗಳನ್ನು ಸಮಾಧಿಮಾಡುತ್ತಿದ್ದರು. 5ಇಸ್ರಾಯೇಲರು ರಮ್ಸೇಸಿನಿಂದ ಹೊರಟು ಸುಕ್ಕೋತಿನಲ್ಲಿ ಇಳಿದುಕೊಂಡರು. 6ಸುಕ್ಕೋತಿನಿಂದ ಹೊರಟು ಅರಣ್ಯದ ಅಂಚಿನಲ್ಲಿರುವ ಏತಾಮಿನಲ್ಲಿ ಇಳಿದುಕೊಂಡರು. 7ಏತಾಮಿನಿಂದ ಹೊರಟು ಬಾಳ್ಚೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ದೋಲಿನ ಪೂರ್ವದಲ್ಲಿ ಇಳಿದುಕೊಂಡರು. 8ಪೀಹಹೀರೋತಿನಿಂದ ಹೊರಟು ಸಮುದ್ರದ ಮಧ್ಯದಲ್ಲೇ ನಡೆದು ಅರಣ್ಯಕ್ಕೆ ಬಂದರು. ಏತಾಮಿನ ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ಮಾರಾ ಎಂಬ ಸ್ಥಳದಲ್ಲಿ ಇಳಿದುಕೊಂಡರು. 9ಮಾರಾದಿಂದ ಹೊರಟು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ, ಎಪ್ಪತ್ತು ಖರ್ಜೂರದ ಮರಗಳೂ ಇದ್ದುದರಿಂದ ಅಲ್ಲಿಯೇ ಇಳಿದುಕೊಂಡರು. 10ಏಲೀಮಿನಿಂದ ಹೊರಟು ಕೆಂಪು ಸಮುದ್ರದ ದಡದಲ್ಲಿ ಇಳಿದುಕೊಂಡರು. 11ಕೆಂಪು ಸಮುದ್ರದಿಂದ ಹೊರಟು ಸೀನ್ ಮರುಭೂಮಿಯಲ್ಲಿ ಇಳಿದುಕೊಂಡರು. 12ಸೀನ್ ಮರುಭೂಮಿಯಿಂದ ಹೊರಟು ದೊಪ್ಕದಲ್ಲಿ ಇಳಿದುಕೊಂಡರು. 13ದೊಪ್ಕದಿಂದ ಹೊರಟು ಆಲೂಷಿನಲ್ಲಿ ಇಳಿದುಕೊಂಡರು. 14ಆಲೂಷಿನಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಸಿಕ್ಕಲಿಲ್ಲ. 15ರೆಫೀದೀಮಿನಿಂದ ಹೊರಟು ಸೀನಾಯಿ ಮರುಭೂಮಿಯಲ್ಲಿ ಇಳಿದುಕೊಂಡರು. 16ಸೀನಾಯಿ ಮರುಭೂಮಿಯಿಂದ ಹೊರಟು ಕಿಬ್ರೋತ್ ಹತಾವದಲ್ಲಿ ಇಳಿದುಕೊಂಡರು. 17ಕಿಬ್ರೋತ್ ಹತಾವದಿಂದ ಹೊರಟು ಹಚೇರೋತಿನಲ್ಲಿ ಇಳಿದುಕೊಂಡರು. 18ಹಚೇರೋತಿನಿಂದ ಹೊರಟು ರಿತ್ಮದಲ್ಲಿ ಇಳಿದುಕೊಂಡರು. 19ರಿತ್ಮದಿಂದ ಹೊರಟು ರಿಮ್ಮೋನ್ ಪೆರೆಚಿನಲ್ಲಿ ಇಳಿದುಕೊಂಡರು. 20ರಿಮ್ಮೋನ್ ಪೆರೆಚಿನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು. 21ಲಿಬ್ನದಿಂದ ಹೊರಟು ರಿಸ್ಸದಲ್ಲಿ ಇಳಿದುಕೊಂಡರು. 22ರಿಸ್ಸದಿಂದ ಹೊರಟು ಕೆಹೇಲಾತದಲ್ಲಿ ಇಳಿದುಕೊಂಡರು. 23ಕೆಹೇಲಾತದಿಂದ ಹೊರಟು ಶೆಫೆರ್ ಬೆಟ್ಟದಲ್ಲಿ ಇಳಿದುಕೊಂಡರು. 24ಶೆಫೆರ್ ಬೆಟ್ಟದಿಂದ ಹೊರಟು ಹರಾದದಲ್ಲಿ ಇಳಿದುಕೊಂಡರು. 25ಹರಾದದಿಂದ ಹೊರಟು ಮಖೇಲೋತಿನಲ್ಲಿ ಇಳಿದುಕೊಂಡರು. 26ಮಖೇಲೋತಿನಿಂದ ಹೊರಟು ತಹತಿನಲ್ಲಿ ಇಳಿದುಕೊಂಡರು. 27ತಹತಿನಿಂದ ಹೊರಟು ತೆರಹದಲ್ಲಿ ಇಳಿದುಕೊಂಡರು. 28ತೆರಹದಿಂದ ಹೊರಟು ಮಿತ್ಕದಲ್ಲಿ ಇಳಿದುಕೊಂಡರು. 29ಮಿತ್ಕದಿಂದ ಹೊರಟು ಹಷ್ಮೋನದಲ್ಲಿ ಇಳಿದುಕೊಂಡರು. 30ಹಷ್ಮೋನದಿಂದ ಹೊರಟು ಮೋಸೇರೋತಿನಲ್ಲಿ ಇಳಿದುಕೊಂಡರು. 31ಮೋಸೇರೋತಿನಿಂದ ಹೊರಟು ಬೆನೇಯಾಕಾನಿನಲ್ಲಿ ಇಳಿದುಕೊಂಡರು. 32ಬೆನೇಯಾಕಾನಿನಿಂದ ಹೊರಟು ಹೋರ್ಹಗಿದ್ಗಾದಿನಲ್ಲಿ ಇಳಿದುಕೊಂಡರು. 33ಹೋರ್ಹಗಿದ್ಗಾದಿನಿಂದ ಹೊರಟು ಯೊಟ್ಬಾತದಲ್ಲಿ ಇಳಿದುಕೊಂಡರು. 34ಯೊಟ್ಬಾತದಿಂದ ಹೊರಟು ಅಬ್ರೋನದಲ್ಲಿ ಇಳಿದುಕೊಂಡರು. 35ಅಬ್ರೋನದಿಂದ ಹೊರಟು ಎಚ್ಯೋನ್ ಗೆಬೆರಿನಲ್ಲಿ ಇಳಿದುಕೊಂಡರು. 36ಎಚ್ಯೋನ್ ಗೆಬೆರಿನಿಂದ ಹೊರಟು ಕಾದೇಶೆಂಬ ಚಿನ್ ಮರುಭೂಮಿಯಲ್ಲಿ ಇಳಿದುಕೊಂಡರು. 37ಕಾದೇಶಿನಿಂದ ಹೊರಟು ಎದೋಮ್ಯರ ದೇಶದ ಅಂಚಿನಲ್ಲಿರುವ ಹೋರ್ ಬೆಟ್ಟದ ಬಳಿಯಲ್ಲಿ ಇಳಿದುಕೊಂಡರು. 38ಮಹಾಯಾಜಕನಾದ ಆರೋನನು ಯೆಹೋವನಿಂದ ಅಪ್ಪಣೆಯನ್ನು ಹೊಂದಿ ಹೋರ್ ಬೆಟ್ಟವನ್ನು ಹತ್ತಿ, ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ನಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಅಲ್ಲೇ ಪ್ರಾಣಬಿಟ್ಟನು. 39ಆರೋನನು ಹೋರ್ ಬೆಟ್ಟದಲ್ಲಿ ಸತ್ತಾಗ ಅವನು ನೂರ ಇಪ್ಪತ್ತಮೂರು ವರ್ಷದವನಾಗಿದ್ದನು. 40ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿ ವಾಸವಾಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿದನು. 41ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಚಲ್ಮೋನದಲ್ಲಿ ಇಳಿದುಕೊಂಡರು. 42ಚಲ್ಮೋನದಿಂದ ಹೊರಟು ಪೂನೋನಿನಲ್ಲಿ ಇಳಿದುಕೊಂಡರು. 43ಪೂನೋನಿನಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು. 44ಓಬೋತಿನಿಂದ ಹೊರಟು ಮೋವಾಬ್ಯರ ಗಡಿಯಲ್ಲಿರುವ ಯೊರ್ದನ್ ನದಿಯ ಆಚೆಯಿರುವ ಇಯ್ಯೀಮಿನಲ್ಲಿ ಇಳಿದುಕೊಂಡರು. 45ಇಯ್ಯೀಮಿನಿಂದ ಹೊರಟು ದೀಬೋನ್ ಗಾದಿನಲ್ಲಿ ಇಳಿದುಕೊಂಡರು. 46ದೀಬೋನ್ ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದುಕೊಂಡರು. 47ಅಲ್ಮೋನ್ ದಿಬ್ಲಾತಯಿಮಿನಿಂದ ಹೊರಟು ಅಬಾರೀಮ್ ಬೆಟ್ಟಗಳಲ್ಲಿರುವ ನೇಬೋವಿನ ಪೂರ್ವದಲ್ಲಿ ಇಳಿದುಕೊಂಡರು. 48ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋ ಪಟ್ಟಣದ ಹತ್ತಿರ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಳಿದುಕೊಂಡರು. 49ಅವರು ಮೋವಾಬ್ಯರ ಮೈದಾನದಲ್ಲಿ ಬೇತ್ ಯೆಷೀಮೋತಿನಿಂದ ಆಬೇಲ್ ಶಿಟ್ಟೀಮಿನವರೆಗೂ ಯೊರ್ದನ್ ನದಿಯ ತೀರದಲ್ಲಿ ಇಳಿದುಕೊಂಡರು. 50ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, 51“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನೀವು ಯೊರ್ದನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದಾಗ, 52ಆ ದೇಶದ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಟ್ಟು ಅವರ ವಿಚಿತ್ರವಾದ ಕಲ್ಲುಗಳನ್ನೂ, ಲೋಹವಿಗ್ರಹಗಳನ್ನೂ ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು. 53ನಾನು ನಿಮಗೆ ಆ ದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟದರಿಂದ ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು. 54ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ, ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವತ್ತು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವುದೋ ಆ ಸ್ಥಳದಲ್ಲಿಯೇ ಆ ಕುಟುಂಬದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು. 55ನೀವು ದೇಶದ ನಿವಾಸಿಗಳನ್ನು ಹೊರಡಿಸಿಬಿಡದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆಯೂ, ಪಕ್ಕೆತಿವಿಯುವ ಶೂಲಗಳಂತೆಯೂ, ಆಗಿ ನೀವು ವಾಸಿಸುವ ದೇಶದಲ್ಲಿ ನಿಮಗೆ ಕಂಟಕರಾಗಿರುವರು. 56ಅದಲ್ಲದೆ ನಾನು ಅವರಿಗೆ ಏನು ಮಾಡಬೇಕೆಂದು ಯೋಚಿಸಿದೇನೋ ಹಾಗೆ ನಿಮಗೂ ಮಾಡುವೆನು.’”

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.