Indian Revised Version — Kannada (2019)
ಕೀರ್ತನೆಗಳು 100
1ಕೃತಜ್ಞತಾಯಜ್ಞ ಕೀರ್ತನೆ. ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ. 2ಯೆಹೋವನನ್ನು ಸಂತೋಷದಿಂದ ಸೇವಿಸಿರಿ; ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ. 3ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ. 4ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ, ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರಗಳನ್ನು ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ. 5ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
This chapter is not in this version.
Keep going
Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..