Skip to content

Indian Revised Version — Kannada (2019)

ಕೀರ್ತನೆಗಳು 101

1ದಾವೀದನ ಕೀರ್ತನೆ. ಪ್ರೀತಿ, ನೀತಿಗಳನ್ನು ಕುರಿತು ಹಾಡುವೆನು; ಯೆಹೋವನೇ, ನಿನ್ನನ್ನು ಕೊಂಡಾಡುವೆನು. 2ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; ನನಗೆ ಯಾವಾಗ ದರ್ಶನಕೊಡುವಿ? ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು. 3ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ; ದುರಾಚಾರವನ್ನು ಹಗೆಮಾಡುತ್ತೇನೆ, ಅದರ ಗೊಡವೆಯೇ ನನಗೆ ಬೇಡ. 4ಮೂರ್ಖತನವು ನನ್ನನ್ನು ಬಿಟ್ಟು ಹೋಗಲಿ; ಕೆಟ್ಟತನವನ್ನು ಅರಿಯದಿರುವೆನು. 5ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ. 6ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು, ಸನ್ಮಾರ್ಗಿಯೇ ನನ್ನ ಸೇವೆಯಲ್ಲಿರಬೇಕು. 7ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು; ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು. 8ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ, ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು.

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.