Indian Revised Version — Kannada (2019)
ಕೀರ್ತನೆಗಳು 11
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನದು. ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ನೀವು, “ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ” ಎಂದು ಹೇಳುವುದೇಕೆ? 2ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ, ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ. 3ಆಧಾರಗಳೇ ಕೆಡವಲ್ಪಟ್ಟ ಮೇಲೆ ನೀತಿವಂತನ ಗತಿ ಏನಾದೀತು? 4ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ. 5ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ; ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ. 6ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ. ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ. 7ಏಕೆಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನ್ನಿಧ್ಯವನ್ನು ಸೇರುವರು.
This chapter is not in this version.
Keep going
Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..