Indian Revised Version — Kannada (2019)
ಕೀರ್ತನೆಗಳು 112
1ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು. 2ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವುದು; ನೀತಿವಂತನ ವಂಶವು ಶುಭಹೊಂದುವುದು. 3ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು. 4ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು; ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ. 5ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು. 6ಅವನು ಎಂದಿಗೂ ಕದಲುವುದಿಲ್ಲ; ನೀತಿವಂತನನ್ನು ಯಾವಾಗಲೂ ಸ್ಮರಿಸುವರು. 7ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ, ಅವನ ಮನಸ್ಸು ಸ್ಥಿರವಾಗಿರುವುದು. 8ದುಷ್ಟರಿಗಾಗುವ ಶಿಕ್ಷೆಯನ್ನು ಕಣ್ಣಾರೆ ಕಾಣುವೆನೆಂಬ ಭರವಸೆ ಇರುವುದರಿಂದ ಅವನ ಮನಸ್ಸು ದೃಢವಾಗಿದೆ, ಹೆದರುವುದಿಲ್ಲ. 9ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು. 10ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ನಾಶವಾಗುವನು. ದುಷ್ಟರ ನಿರೀಕ್ಷೆಯು ಭಂಗವಾಗುವುದು.
This chapter is not in this version.
Keep going
Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..