Indian Revised Version — Kannada (2019)
ಕೀರ್ತನೆಗಳು 12
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ. 2ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ. 3ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ. 4ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ. 5ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ. 6ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ. 7ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ, ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ, 8ಯೆಹೋವನೇ, ನೀನು ನಮ್ಮನ್ನು ನೋಡಿದ್ದಿ, ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ.
This chapter is not in this version.
Keep going
Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..