Skip to content

Indian Revised Version — Kannada (2019)

ಕೀರ್ತನೆಗಳು 121

1ಯಾತ್ರಾಗೀತೆ. ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವುದು? 2ಭೂಮಿ, ಆಕಾಶಗಳನ್ನು ನಿರ್ಮಿಸಿದ ಯೆಹೋವನಿಂದಲೇ, ನನ್ನ ಸಹಾಯವು ಬರುತ್ತದೆ. 3ಆತನು ನಿನ್ನ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿನ್ನನ್ನು ಕಾಯುವವನು ತೂಕಡಿಸದಿರಲಿ. 4ಇಗೋ, ಇಸ್ರಾಯೇಲರನ್ನು ಕಾಯುವಾತನು, ತೂಕಡಿಸುವುದೂ ಇಲ್ಲ, ನಿದ್ರಿಸುವುದೂ ಇಲ್ಲ. 5ನಿನ್ನನ್ನು ಕಾಯುವವನು ಯೆಹೋವನೇ; ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ. 6ಹಗಲಿನಲ್ಲಿ ಸೂರ್ಯನೂ, ಇರುಳಿನಲ್ಲಿ ಚಂದ್ರನೂ, ನಿನ್ನನ್ನು ಬಾಧಿಸುವುದಿಲ್ಲ. 7ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು. 8ನೀನು ಹೋಗುವಾಗಲೂ, ಬರುವಾಗಲೂ, ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.