Skip to content

Indian Revised Version — Kannada (2019)

ಕೀರ್ತನೆಗಳು 124

1ಯಾತ್ರಾಗೀತೆ; ದಾವೀದನದು. “ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?”, ಎಂದು ಇಸ್ರಾಯೇಲರೇ ಹೇಳಲಿ. 2ನರ ಮನುಷ್ಯರು ನಮಗೆ ವಿರುದ್ಧವಾಗಿ ಎದ್ದಾಗ, ಯೆಹೋವನು ನಮಗಿಲ್ಲದಿದ್ದರೆ, 3“ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು, ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು; 4ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಡಿದುಕೊಂಡು ಹೋಗುತ್ತಿತ್ತು; ನದಿಯು ನಮ್ಮನ್ನು ಕೊಚ್ಚಿಕೊಂಡು ಹೋಗುತ್ತಿತ್ತು; 5ಮೀರಿದ ಪ್ರವಾಹವು ನಮ್ಮನ್ನು ಮುಳುಗಿಸಿಬಿಡುತ್ತಿತ್ತು.” 6ಯೆಹೋವನಿಗೆ ಕೊಂಡಾಟವಾಗಲಿ; ಆತನು ನಮ್ಮನ್ನು ಅವರ ಹಲ್ಲುಗಳಿಗೆ ಸೀಳಿಬಿಡಲು ಕೊಡಲಿಲ್ಲ. 7ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು. 8ಭೂಮಿ, ಆಕಾಶಗಳನ್ನು ಉಂಟುಮಾಡಿದ, ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು.

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.