Indian Revised Version — Kannada (2019)
ಕೀರ್ತನೆಗಳು 125
1ಯಾತ್ರಾಗೀತೆ. ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ. 2ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ, ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು. 3ದುಷ್ಟರ ದಂಡಾಧಿಕಾರವು ನೀತಿವಂತರ ಸ್ವತ್ತಿನಲ್ಲಿ ಉಳಿಯುವುದೇ ಇಲ್ಲ; ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಾಕಬಹುದು. 4ಯೆಹೋವನೇ, ಒಳ್ಳೆಯವರೂ, ಯಥಾರ್ಥಚಿತ್ತರೂ, ಆಗಿರುವವರಿಗೆ ಉಪಕಾರಮಾಡು. 5ಯೆಹೋವನು ಡೊಂಕುದಾರಿ ಹಿಡಿದವರನ್ನು, ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. ಇಸ್ರಾಯೇಲರಿಗೆ ಶುಭವುಂಟಾಗಲಿ.
This chapter is not in this version.
Keep going
Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..