Indian Revised Version — Kannada (2019)
ಕೀರ್ತನೆಗಳು 126
1ಯಾತ್ರಾಗೀತೆ. ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ, ನಾವು ಕನಸು ಕಂಡವರಂತೆ ಇದ್ದೆವು. 2ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. 3ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ; ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ. 4ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ, ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರುಗಿ ಬರಮಾಡು. 5ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು, 6ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು, ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು.
This chapter is not in this version.
Keep going
Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..