Skip to content

Indian Revised Version — Kannada (2019)

ಕೀರ್ತನೆಗಳು 127

1ಯಾತ್ರಾಗೀತೆ; ಸೊಲೊಮೋನನದು. ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ. 2ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ; ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ. 3ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ. 4ಯೌವನದಲ್ಲಿ ಹುಟ್ಟಿದ ಮಕ್ಕಳು, ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ; 5ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ ಅಂಥವರು ಅವಮಾನ ಹೊಂದುವುದಿಲ್ಲ.

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.