Skip to content

Indian Revised Version — Kannada (2019)

ಕೀರ್ತನೆಗಳು 128

1ಯಾತ್ರಾಗೀತೆ. ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು. 2ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, ನೀನು ಧನ್ಯನು, ನಿನಗೆ ಶುಭವಿರುವುದು. 3ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ಎಣ್ಣೇಮರದ ಸಸಿಗಳ ಹಾಗೆ ಇರುವರು. 4ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು, ಈ ರೀತಿಯಾಗಿ ಆಶೀರ್ವಾದ ಹೊಂದುವನು. 5ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ; ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು. 6ಮಕ್ಕಳ ಮಕ್ಕಳನ್ನು ಕಾಣುವವನಾಗು. ಇಸ್ರಾಯೇಲರಿಗೆ ಶುಭವಾಗಲಿ.

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.