Skip to content

Indian Revised Version — Kannada (2019)

ಕೀರ್ತನೆಗಳು 130

1ಯಾತ್ರಾಗೀತೆ. ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ. 2ಕರ್ತನೇ, ನನ್ನ ಮೊರೆಯನ್ನು ಕೇಳು; ನನ್ನ ವಿಜ್ಞಾಪನೆಯ ಶಬ್ದಕ್ಕೆ ಕಿವಿದೆರೆ. 3ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ? 4ನೀನು ಪಾಪವನ್ನು ಕ್ಷಮಿಸುವವನಾದುದರಿಂದ, ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು. 5ನಾನು ಯೆಹೋವನನ್ನು ಎದುರುನೋಡುತ್ತೇನೆ; ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ; ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ. 6ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ; ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ, ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ. 7ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು. 8ಆತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು.

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.