Skip to content

Indian Revised Version — Kannada (2019)

ಕೀರ್ತನೆಗಳು 15

1ದಾವೀದನ ಕೀರ್ತನೆ. ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು? ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು? 2ಅವನು ಸಜ್ಜನನೂ, ನೀತಿವಂತನೂ, ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು. 3ಅವನು ಚಾಡಿಯನ್ನು ಹೇಳದವನೂ, ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ, ಯಾರನ್ನೂ ನಿಂದಿಸದವನೂ ಆಗಿರಬೇಕು. 4ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು. 5ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.