Skip to content

Indian Revised Version — Kannada (2019)

ಕೀರ್ತನೆಗಳು 150

1ಯೆಹೋವನಿಗೆ ಸ್ತೋತ್ರ! ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ. 2ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ; ಆತನ ಮಹಾಪ್ರಭಾವಕ್ಕೆ ಸರಿಯಾಗಿ ಆತನನ್ನು ಸ್ತುತಿಸಿರಿ. 3ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ. 4ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ. 5ತಾಳದಿಂದ ಆತನನ್ನು ಸ್ತುತಿಸಿರಿ; ಝಲ್ಲರಿಯಿಂದ ಆತನನ್ನು ಸ್ತುತಿಸಿರಿ. 6ಶ್ವಾಸವಿರುವ ಎಲ್ಲವೂ ಯೆಹೋವನನ್ನು ಸ್ತುತಿಸಲಿ; ಯೆಹೋವನಿಗೆ ಸ್ತೋತ್ರ!

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.