Skip to content

Indian Revised Version — Kannada (2019)

ಕೀರ್ತನೆಗಳು 16

1ದಾವೀದನ ಕಾವ್ಯ. ದೇವರೇ, ನಾನು ನಿನ್ನ ಶರಣಾಗತನು; ನನ್ನನ್ನು ಕಾಪಾಡು. 2ನಾನು ಯೆಹೋವನನ್ನು ಕುರಿತು, “ನೀನೇ ನನ್ನ ಒಡೆಯನು; ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ” ಎಂದು ಹೇಳುವೆನು. 3ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ, “ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು” ಎಂದು ಹೇಳುವೆನು. 4ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ. 5ನನ್ನ ಪಾಲೂ, ನನ್ನ ಪಾನವೂ ಯೆಹೋವನೇ, ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ. 6ನನಗೆ ಪ್ರಾಪ್ತವಾಗಿರುವ ಸ್ವತ್ತು ರಮಣೀಯವಾದದ್ದು; ಅದು ನನಗೆ ಸಂತೃಪ್ತಿಕರವಾಗಿದೆ. 7ಯೆಹೋವನು ನನಗೆ ಆಲೋಚನೆಯನ್ನು ಹೇಳಿಕೊಡುತ್ತಾನೆ; ನಾನು ಆತನನ್ನು ಕೊಂಡಾಡುವೆನು. ರಾತ್ರಿಯ ಸಮಯಗಳಲ್ಲಿ ನನ್ನ ಅಂತರಾತ್ಮವು ನನ್ನನ್ನು ಬೋಧಿಸುತ್ತದೆ. 8ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ. 9ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ; ನನ್ನ ಮನವು ಉಲ್ಲಾಸಗೊಳ್ಳುತ್ತದೆ; ನನ್ನ ಶರೀರವೂ ಸುರಕ್ಷಿತವಾಗಿರುವುದು. 10ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ. 11ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.