Indian Revised Version — Kannada (2019)
ಕೀರ್ತನೆಗಳು 23
1ದಾವೀದನ ಕೀರ್ತನೆ. ಯೆಹೋವನು ನನಗೆ ಕುರುಬನು; ಕೊರತೆಪಡೆನು. 2ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ. 3ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ. 4ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ. 5ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ. 6ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.
This chapter is not in this version.
Keep going
Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..