Skip to content

Indian Revised Version — Kannada (2019)

ಕೀರ್ತನೆಗಳು 45

11 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋಶನ್ನೀಮ್ ಎಂಬ ರಾಗದ ಮೇಲೆ ಹಾಡತಕ್ಕದ್ದು; ಕೋರಹೀಯರ ಪದ್ಯ; ಪ್ರೇಮಗೀತೆ. ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೆಯ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ. 2ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು; ನಿನ್ನ ಮಾತುಗಳು ಬಹು ಮಧುರ; ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬುದು ಸ್ವಷ್ಟವಾಗುತ್ತದೆ. 3ಶೂರನೇ, ಮಹಿಮೆ ಮತ್ತು ಪ್ರಭಾವವನ್ನು ಧರಿಸಿಕೊಂಡು, ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ. 4ಸತ್ಯತೆ, ದೈನ್ಯ, ನೀತಿಗಳನ್ನು ಸ್ಥಾಪಿಸುವುದಕ್ಕಾಗಿ ಸಕಲ ವೈಭವದೊಡನೆ ವಾಹನರೂಢನಾಗಿ, ವಿಜಯೋತ್ಸವದೊಡನೆ ಹೊರಡು. ನಿನ್ನ ಬಲಗೈ ಭಯಂಕರ ಕೃತ್ಯಗಳನ್ನು ನಡೆಸಲಿ. 5ನಿನ್ನ ಬಾಣಗಳು ಮಹಾತೀಕ್ಷ್ಣವಾಗಿರುವವು; ಅವು ರಾಜನ ಶತ್ರುಗಳ ಎದೆಯನ್ನು ಭೇದಿಸುವವು; ಶತ್ರುಜನಾಂಗಗಳು ನಿನ್ನ ಪಾದದ ಕೆಳಗೆ ಬೀಳುವವು. 6ದೇವರು ನಿನಗೆ ಕೊಟ್ಟಿರುವ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನಿನ್ನ ರಾಜದಂಡವು ನ್ಯಾಯ ದಂಡವಾಗಿದೆ. 7ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ. 8ನಿನ್ನ ವಸ್ತ್ರಗಳೆಲ್ಲಾ ರಕ್ತಬೋಳ, ದಾಲ್ಚಿನ್ನಿ, ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತ ಅರಮನೆಗಳೊಳಗೆ ಉತ್ಕೃಷ್ಟವಾದ ವಾದ್ಯಗಳು ನಿನ್ನನ್ನು ಆನಂದಗೊಳಿಸುತ್ತವೆ. 9ನಿನ್ನ ಸ್ತ್ರೀಪರಿವಾರದಲ್ಲಿ ರಾಜಕುಮಾರಿಯರೂ ಇದ್ದಾರೆ; ಪಟ್ಟದ ರಾಣಿಯು ಓಫೀರ್ ದೇಶದ ಬಂಗಾರದ ಆಭರಣಗಳಿಂದ ಅಲಂಕೃತಳಾಗಿ, ನಿನ್ನ ಬಲಭಾಗದಲ್ಲಿ ನಿಂತಿರುವಳು. 10ಎಲೌ ರಾಜಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು; ಸ್ವಜನರನ್ನೂ ತೌರಮನೆಯನ್ನೂ ಮರೆತುಬಿಡು. 11ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲು ಅಪೇಕ್ಷಿಸುವನು. ಆತನೇ ನಿನಗೆ ಒಡೆಯನು; ಆತನನ್ನು ಗೌರವಿಸು. 12ತೂರ್ ಸಂಸ್ಥಾನದವರು ಕಾಣಿಕೆಗಳೊಂದಿಗೆ ಬರುವರು; ಪ್ರಜೆಗಳಲ್ಲಿ ಐಶ್ವರ್ಯವಂತರು ನಿನ್ನ ದಯೆಯನ್ನು ಕೋರುವರು. 13ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ; ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ. 14ಆಕೆಯು ಬೂಟೇದಾರಿ ವಸ್ತ್ರಗಳನ್ನು ಧರಿಸಿಕೊಂಡು, ಅವಳ ಸೇವೆಗಾಗಿ ಕನ್ಯೆಯರಾದ ಸಖೀಯರು ಅವಳನ್ನು ಹಿಂಬಾಲಿಸಿ, ಅರಸನ ಬಳಿಗೆ ಬರುವರು. 15ಅವರು ಉಲ್ಲಾಸದಿಂದಲೂ, ಸಂತೋಷದಿಂದಲೂ ಬಂದು, ಅರಮನೆಯೊಳಗೆ ಪ್ರವೇಶಿಸುವರು. 16ನಿನ್ನ ಪೂರ್ವಿಕರ ಸ್ಥಳಗಳಲ್ಲಿ ನಿನ್ನ ಮಕ್ಕಳು ಇರುವರು; ನೀನು ಅವರನ್ನು ಭೂಮಿಯ ಮೇಲೆಲ್ಲಾ ಅಧಿಕಾರಿಗಳನ್ನಾಗಿ ನೇಮಿಸುವಿ. 17ನಿನ್ನ ಹೆಸರು ತಲತಲಾಂತರಗಳಲ್ಲಿ ಜ್ಞಾಪಕವಿರುವಂತೆ ನಾನು ಮಾಡುವೆನು; ಅದುದರಿಂದ ಎಲ್ಲಾ ಜನಗಳು ನಿನ್ನನ್ನು ಯುಗಯುಗಾಂತರಗಳಲ್ಲಿಯೂ ಪ್ರಶಂಸಿಸುವರು.

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.