Skip to content

Indian Revised Version — Kannada (2019)

ಕೀರ್ತನೆಗಳು 46

11 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಗೀತೆ; ತಾರಕಸ್ಥಾಯಿಯಲ್ಲಿ ಹಾಡತಕ್ಕದ್ದು. ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು. 2ಆದುದರಿಂದ ಭೂಮಿಯು ಮಾರ್ಪಟ್ಟರೂ, ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ, ನಮಗೇನೂ ಭಯವಿಲ್ಲ. 3ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು? ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ? ಸೆಲಾ 4ಒಂದು ನದಿ ಇದೆ; ಅದರ ಕಾಲುವೆಗಳು, ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ, ದೇವರ ನಗರವನ್ನು ಸಂತೋಷಪಡಿಸುತ್ತವೆ. 5ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು. 6ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು. 7ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ 8ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; ಆತನು ಭೂಲೋಕದಲ್ಲಿ ಎಂಥಾ ವಿನಾಶವನ್ನು ಉಂಟುಮಾಡಿದ್ದಾನೆ. 9ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ. 10“ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ. 11ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.