Skip to content

Indian Revised Version — Kannada (2019)

ಕೀರ್ತನೆಗಳು 47

1ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ. 2ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ. 3ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ, ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ. 4ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ, ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ. ಸೆಲಾ 5ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ. 6ದೇವರನ್ನು ಸಂಕೀರ್ತಿಸಿರಿ, ಸ್ತುತಿಸಿ ಹಾಡಿರಿ; ನಮ್ಮ ಅರಸನನ್ನು ಕೀರ್ತಿಸಿರಿ, ಕೊಂಡಾಡಿರಿ. 7ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ. 8ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ. 9ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. ಆತನೇ ಸರ್ವೋನ್ನತನು.

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.