Skip to content

Indian Revised Version — Kannada (2019)

ಕೀರ್ತನೆಗಳು 53

1ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಮಹಲಾತ್ ಎಂಬ ರಾಗದ ಪ್ರಕಾರ ಹಾಡತಕ್ಕದ್ದು; ದಾವೀದನ ಪದ್ಯ. ದುರ್ಮತಿಗಳು, “ದೇವರಿಲ್ಲ” ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟವರು; ಅಸಹ್ಯವಾದ ಅಕ್ರಮಗಳನ್ನು ನಡೆಸುತ್ತಾರೆ; ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ. 2ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು ದೇವರು ಆಕಾಶದಿಂದ ಮನುಷ್ಯರನ್ನು ನೋಡಲಾಗಿ, 3ಒಳ್ಳೆಯದನ್ನು ನಡೆಸುವವರು ಒಬ್ಬರೂ ಇಲ್ಲ; ಅವರೆಲ್ಲರೂ ದ್ರೋಹಿಗಳಾಗಿ ಕೆಟ್ಟುಹೋದವರೇ. 4ದುಷ್ಟತ್ವವನ್ನು ನಡೆಸುವವರು ಯಾರೆಂದು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಕೊಳ್ಳೆಹೊಡೆದು ಜೀವಿಸುತ್ತಾರೆ; ದೇವರನ್ನು ಪ್ರಾರ್ಥಿಸುವುದಿಲ್ಲ. 5ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ, ಅವರು ಪಕ್ಕನೆ ಭಯಭ್ರಾಂತರಾದರು; ದುಷ್ಟರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು. 6ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ದೇವರು ತನ್ನ ಭಾಗ್ಯವನ್ನು ಜನರಿಗೆ ಹಿಂದಿರುಗಿಸುವಾಗ, ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲರು ಹರ್ಷಿಸುವರು.

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.