Skip to content

Indian Revised Version — Kannada (2019)

ಕೀರ್ತನೆಗಳು 60

1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಷೂಷನ್ ಎದೂತೆಂಬ ರಾಗ; ದಾವೀದನು ಅರಾಮ್ ರಾಜ್ಯಗಳ ಸಂಗಡ ಯುದ್ಧ ಮಾಡುವಷ್ಟರೊಳಗೆ ಯೋವಾಬನು ಹಿಂದಿರುಗಿ ಹೋಗಿ ಉಪ್ಪಿನ ತಗ್ಗಿನಲ್ಲಿ ಹನ್ನೆರಡು ಸಾವಿರ ಎದೋಮ್ಯರನ್ನು ಹೊಡೆದಾಗ ದಾವೀದನು ರಚಿಸಿದ ಕಾವ್ಯ. ಬಾಯಿಪಾಠ ಮಾಡಿಸತಕ್ಕದ್ದು. ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ; ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ; ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು. 2ನೀನು ದೇಶವನ್ನು ಕಂಪನಗೊಳಿಸಿ ಒಡೆದುಬಿಟ್ಟಿದ್ದೀ; ಅದು ನಡುಗುತ್ತಿರುವುದಲ್ಲಾ. ಅದರ ಒಡಕುಗಳನ್ನು ಸರಿಮಾಡು; 3ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ. 4ನೀನು ನಿನ್ನ ಭಕ್ತರಿಗೆ ಧ್ವಜವನ್ನು ಕೊಟ್ಟಿದ್ದು, ಆದ್ದರಿಂದ ಅವರು ಬಿಲ್ಲಿನಿಂದ ತಪ್ಪಿಸಿಕೊಳ್ಳಬಹುದು. ಸೆಲಾ 5ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು. ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು. 6ದೇವರು ತನ್ನ ಪವಿತ್ರಸ್ಥಳದಲ್ಲಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳೆದುಕೊಡುವೆನು. 7ಗಿಲ್ಯಾದ್ ಸೀಮೆಯೂ ಮತ್ತು ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. ನನ್ನ ರಾಜದಂಡವು ಯೆಹೂದ ಕುಲವೇ. 8ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು; ಎದೋಮ್ ಸೀಮೆ ನನ್ನ ಪಾದರಕ್ಷೆಗಳನ್ನು ಬಿಡುವ ಸ್ಥಳ. ಫಿಲಿಷ್ಟಿಯ ದೇಶವೇ ನಾನು ನಿನ್ನ ಮೇಲೆ ಜಯಹೊಂದಿ ನಿನ್ನ ವಿಷಯವಾಗಿ ಜಯಘೋಷ ಮಾಡುವೆನು. 9ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು? 10ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ! ದೇವರೇ, ನಮ್ಮನ್ನು ಕೈಬಿಟ್ಟಿರುವೆಯಾ? 11ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು; ಮನುಷ್ಯರ ಸಹಾಯವು ವ್ಯರ್ಥ. 12ದೇವರ ಸಹಾಯದಿಂದ ಶೂರಕೃತ್ಯಗಳನ್ನು ನಡೆಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.