Skip to content

Indian Revised Version — Kannada (2019)

ಕೀರ್ತನೆಗಳು 61

1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. ದೇವರೇ, ನನ್ನ ಕೂಗನ್ನು ಕೇಳಿ ನನ್ನ ಪ್ರಾರ್ಥನೆಗೆ ಕಿವಿಗೊಡು. 2ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ; ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು. 3ನೀನು ನನಗೆ ಶರಣನೂ, ಶತ್ರುಗಳಿಂದ ತಪ್ಪಿಸುವ ಭದ್ರವಾದ ಬುರುಜು ಆಗಿದ್ದೀ. 4ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ; ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು. ಸೆಲಾ 5ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ; ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಸಿಕ್ಕತಕ್ಕ ಬಾಧ್ಯತೆಯನ್ನು ನನಗೂ ದಯಪಾಲಿಸಿದ್ದೀ. 6ಅರಸನು ದೀರ್ಘಕಾಲ ಬಾಳುವಂತೆ ಅನುಗ್ರಹಿಸು; ಅವನ ಆಯಸ್ಸು ತಲತಲಾಂತರಗಳವರೆಗೆ ವೃದ್ಧಿಯಾಗಲಿ. 7ಅವನು ನಿನ್ನ ಸಾನ್ನಿಧ್ಯವನ್ನು ಪಡೆದು, ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ. 8ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ, ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು.

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.