Skip to content

Indian Revised Version — Kannada (2019)

ಕೀರ್ತನೆಗಳು 64

1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ದೇವರೇ, ನನ್ನ ಸ್ವರವನ್ನು ಕೇಳಿ, ಶತ್ರುಭಯದಿಂದ ನನ್ನ ಜೀವವನ್ನು ರಕ್ಷಿಸು. 2ದುಷ್ಟರ ಒಳಸಂಚಿಗೂ, ಕೆಡುಕರ ಗುಪ್ತ ಆಲೋಚನೆಗೂ ಸಿಕ್ಕದಂತೆ, ನನ್ನನ್ನು ತಪ್ಪಿಸಿ ಭದ್ರಪಡಿಸು. 3ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ; ವಿಷವಚನವೆಂಬ ಬಾಣವನ್ನು ಹೂಡಿದ್ದಾರೆ. 4ಗುಪ್ತಸ್ಥಳಗಳಲ್ಲಿದ್ದು ಸಜ್ಜನನಿಗೆ ಗುರಿಯಿಟ್ಟಿದ್ದಾರೆ. ಸ್ವಲ್ಪವೂ ಹೆದರದೆ ಅವನ ಮೇಲೆ ಫಕ್ಕನೆ ಎಸೆಯುತ್ತಾರೆ. 5ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು?” ಅಂದುಕೊಳ್ಳುತ್ತಾರೆ. 6ಅವರು, “ಕೇಡನ್ನು ಕಲ್ಪಿಸಿ, ಒಳ್ಳೆಯ ಉಪಾಯವನ್ನು ಕಂಡುಕೊಂಡಿದ್ದೇವೆ” ಅಂದುಕೊಳ್ಳುತ್ತಾರೆ; ಅವರ ಹೃದಯವೂ, ಅಂತರಂಗದ ಆಲೋಚನೆಯೂ ಅಶೋಧ್ಯವಾಗಿವೆ. 7ಆದರೆ ದೇವರು ಬಾಣವನ್ನು ಎಸೆಯಲು, ಫಕ್ಕನೆ ಅವರಿಗೆ ಗಾಯವಾಗುವುದು. 8ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಅವರು ಎಡವಿಬೀಳುವರು; ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು. 9ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ, ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು. 10ಸದ್ಭಕ್ತರು ಯೆಹೋವನಲ್ಲಿ ಆನಂದಪಟ್ಟು ಆತನನ್ನೇ ಆಶ್ರಯಿಸಿಕೊಳ್ಳುವರು; ಸರಳಹೃದಯದವರೆಲ್ಲರೂ ಹಿಗ್ಗುವರು.

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.