Skip to content

Indian Revised Version — Kannada (2019)

ಕೀರ್ತನೆಗಳು 67

1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಹಾಡು. ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ; ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. ಸೆಲಾ 2ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು. 3ದೇವರೇ, ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ. 4ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ, ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ 5ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ. 6ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ. ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ; 7ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.