Skip to content

Indian Revised Version — Kannada (2019)

ಕೀರ್ತನೆಗಳು 70

1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು, ದಾವೀದನ ಕೀರ್ತನೆ; ಜ್ಞಾಪಕಾರ್ಥ ನೈವೇದ್ಯಸಮರ್ಪಣೆಯಲ್ಲಿ ಹಾಡತಕ್ಕದ್ದು. ದೇವರೇ, ದಯವಿಟ್ಟು ನನ್ನನ್ನು ರಕ್ಷಿಸು. ಯೆಹೋವನೇ, ಬೇಗನೆ ಬಂದು ಸಹಾಯ ಮಾಡು. 2ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ. 3ಆಹಾ, ಆಹಾ ಎಂದು ಪರಿಹಾಸ್ಯಮಾಡುವವರು ತಮಗಾಗುವ ಅಪಮಾನದಿಂದ ಬೆನ್ನು ಕೊಟ್ಟು ಓಡಿಹೋಗಲಿ. 4ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, “ದೇವರು ಮಹೋನ್ನತನು” ಎಂದು ಯಾವಾಗಲೂ ಹೇಳಲಿ. 5ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ದೇವರೇ, ಬೇಗನೆ ಬಾ. ಯೆಹೋವನೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.