Skip to content

Indian Revised Version — Kannada (2019)

ಕೀರ್ತನೆಗಳು 81

1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ಆಸಾಫನ ಕೀರ್ತನೆ. ನಮಗೆ ಬಲಪ್ರದನಾಗಿರುವ ದೇವರಿಗೆ ಉತ್ಸಾಹಧ್ವನಿ ಮಾಡಿರಿ; ಯಾಕೋಬ್ಯರ ದೇವರಿಗೆ ಜಯಘೋಷಮಾಡಿರಿ. 2ರಾಗವನ್ನು ಎತ್ತಿರಿ; ದಮ್ಮಡಿಯನ್ನು ಬಡಿಯಿರಿ; ಇಂಪಾದ ಕಿನ್ನರಿಯನ್ನೂ, ಸ್ವರಮಂಡಲವನ್ನೂ ಬಾರಿಸಿರಿ. 3ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ. 4ಇದು ಇಸ್ರಾಯೇಲರಲ್ಲಿ ಒಂದು ಕಟ್ಟಳೆ; ಇದು ಯಾಕೋಬ್ಯರ ದೇವರು ವಿಧಿಸಿದ್ದು. 5ಆತನು ಐಗುಪ್ತ ದೇಶವನ್ನು ಬಾಧಿಸಲಿಕ್ಕೆ ಹೊರಟಾಗ, ನೆನಪಿಗಾಗಿ ಯೋಸೇಫ್ಯರಲ್ಲಿ ಈ ಕಟ್ಟಳೆಯನ್ನು ನೇಮಿಸಿದನು. ಪರಿಚಯವಿಲ್ಲದವನ ಮಾತು ನನಗೆ ಕೇಳಿಸುತ್ತದೆ; ಏನೆಂದರೆ, 6“ಅವನ ಹೆಗಲನ್ನು ಹೊರೆಗೆ ತಪ್ಪಿಸಿದೆನು; ಅವನ ಕೈಗಳನ್ನು ಪುಟ್ಟಿಯಿಂದ ಬಿಡಿಸಿದೆನು. 7ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು; ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು; ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. ಸೆಲಾ. 8ನನ್ನ ಜನರೇ, ಕೇಳಿರಿ; ಖಂಡಿತವಾಗಿ ಹೇಳುತ್ತೇನೆ, ಇಸ್ರಾಯೇಲರೇ, ಕಿವಿಗೊಟ್ಟರೆ ಎಷ್ಟೋ ಒಳ್ಳೇದು, 9ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು; ಪರರ ದೇವತೆಗಳನ್ನು ಪೂಜಿಸಬಾರದು; 10ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು; ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು. 11ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲರು ನನಗೆ ಸಮ್ಮತಿಸಲಿಲ್ಲ. 12ಆದುದರಿಂದ ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು. 13ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಮಾತನ್ನು ಕೇಳಿ, ನನ್ನ ಮಾರ್ಗದಲ್ಲಿ ನಡೆದರೆ ಎಷ್ಟೋ ಒಳ್ಳೆಯದು! 14ನಾನು ಅವರ ಎದುರಾಳಿಗಳ ಮೇಲೆ ಕೈಯೆತ್ತಿ, ಅವರ ಶತ್ರುಗಳನ್ನು ಸುಲಭವಾಗಿ ಬಗ್ಗಿಸುವೆನು. 15ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು; ಅವರಾದರೋ ಸದಾಕಾಲವೂ ಇರುವರು. 16ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು” ಎಂಬುದೇ.

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.