Skip to content

Indian Revised Version — Kannada (2019)

ಕೀರ್ತನೆಗಳು 93

1ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ. 2ಅನಾದಿಯಿಂದ ನಿನ್ನ ಸಿಂಹಾಸನವು ಸ್ಥಿರವಾಗಿದೆ; ಯುಗಯುಗಾಂತರದಿಂದಲೂ ನೀನು ಇರುವಿ. 3ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರ್ಗರೆದವು; ನದಿಗಳು ಘೋಷಿಸುತ್ತವೆ. 4ಜಲರಾಶಿಗಳ ಘೋಷಕ್ಕಿಂತಲೂ, ಮಹಾತರಂಗಗಳ ಗರ್ಜನೆಗಿಂತಲೂ, ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು. 5ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ; ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.