Skip to content

Indian Revised Version — Kannada (2019)

ಕೀರ್ತನೆಗಳು 97

1ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ. 2ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ. 3ಬೆಂಕಿಯು ಆತನ ಮುಂದೆ ಹೋಗಿ, ಸುತ್ತಲೂ ಆವರಿಸಿ ಆತನ ವೈರಿಗಳನ್ನು ದಹಿಸಿಬಿಡುತ್ತದೆ. 4ಆತನ ಮಿಂಚುಗಳು ಲೋಕವನ್ನು ಬೆಳಗಿಸಿದವು; ಭೂಮಿಯು ಅದನ್ನು ಕಂಡು ನಡುಗಿತು. 5ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಪರ್ವತಗಳು ಮೇಣದಂತೆ ಕರಗಿಹೋದವು. 6ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು; ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು. 7ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ. 8ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿ ಚೀಯೋನ್ ಪಟ್ಟಣವು ಹರ್ಷಿಸಿತು; ಯೆಹೂದ ಪ್ರಾಂತ್ಯದ ಊರುಗಳು ಸಂತೋಷಿಸಿದವು. 9ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ; ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ. 10ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು. 11ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು, ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ. 12ನೀತಿವಂತರೇ, ಯೆಹೋವನಲ್ಲಿ ಆನಂದಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.