Skip to content

Indian Revised Version — Kannada (2019)

ಕೀರ್ತನೆಗಳು 98

1ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ. 2ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ. 3ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ, ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ. 4ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಜಯಘೋಷಮಾಡಿರಿ; ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ. 5ಕಿನ್ನರಿಯೊಡನೆ ಯೆಹೋವನನ್ನು ಸ್ತುತಿಸಿರಿ; ಕಿನ್ನರಿಯನ್ನು ನುಡಿಸುತ್ತಾ ಭಜಿಸಿರಿ. 6ತುತ್ತೂರಿಗಳನ್ನೂ, ಕೊಂಬನ್ನೂ ಊದುತ್ತಾ, ಯೆಹೋವರಾಜನಿಗೆ ಜಯಘೋಷಮಾಡಿರಿ. 7ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ, ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ. 8ನದಿಗಳು ಚಪ್ಪಾಳೆ ಹೊಡೆಯಲಿ; ಪರ್ವತಗಳೆಲ್ಲಾ ಉತ್ಸಾಹಧ್ವನಿಮಾಡಲಿ. 9ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.